Belagavi

ಮಹಾಲಕ್ಷ್ಮಿ ದೇವಿಯ 12ನೇ ಜಾತ್ರಾಮಹೋತ್ಸವ ಪ್ರಯುಕ್ತ ಸುಹಾಸಿನಿಯರಿಂದ ಕುಂಕುಮಾರ್ಚನೆ ಕಾರ್ಯಕ್ರಮ

Share

ಬೆಳಗಾವಿ ಉಷಾ ಕಾಲೋನಿಯ ಮಹಾಲಕ್ಷ್ಮಿ ಮಂದಿರದಲ್ಲಿ ನಡೆದ 12 ನೇ ವರ್ಷದ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವದ ಇಂದು ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಉಷಾ ಕಾಲೋನಿಯ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದ 12ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸೇವಸ್ಥಾನದಲ್ಲಿ ಬೆಳಗಾವಿ ಸುತ್ತಮುತ್ತಲಿನ ಅನೇಕ ಗ್ರಾಮಗಳ ಮಹಿಳೆಯರು ಈ ವೇಳೆ ಕರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಮಹಾಲಕ್ಷ್ಮಿ ಭಕ್ತರೊಬ್ಬರು, ಮಹಾಲಕ್ಷ್ಮಿ ದೇವ್ಥಾನದಲ್ಲಿ ಕಳೆದ 12ವರ್ಷಗಳಿಂದ ಜಾತ್ರಾ ಮಹೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿಯ 12ನೇ ಜಾತ್ರಾಮಹೋತ್ಸವ ಹಿನ್ನೆಲೆಯಲ್ಲಿ ವಿವಿಧ ಯಜ್ಞ, ಯಾಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 65 ವಟುಗಳಿಂದ ಸತತ 5ದಿನಗಳ ಕಾಲ ಯಾಗಗಳು ನೆರವೇರಿವೆ. ಪೂರ್ಣಾಹುತಿ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ವಿಜಯೇಂದ್ರ ಯಡಯೂರಪ್ಪ ಆಗಮಿಸಿದ್ದರು. ಇಂದು ಲಲಿತಾ ಸಹಸ್ರ ನಾಮಾವಳಿ ಹಾಗೂ ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ನೂರಾರು ಜನ ಮಹಿಳೆಯರು ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಸರಸ್ವತಿ ಭಟ್ ಎಂಬವರು, ಉಷಾಕಾಲೋನಿಯ ಮಹಾಲಕ್ಷ್ಮಿ ಮಂದಿರದಲ್ಲಿ ಕಳೆದ 12 ವರ್ಷಗಳಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ 12ನೇ ವರ್ಷದ ಜಾತ್ರಾಮಹೋತ್ಸವದ ಹಿನ್ನೆಲೆ ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಸುತ್ತಮುತ್ತಲಿನ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

 

Tags:

error: Content is protected !!