State

ಮುಂಬೈನ ಪ್ರಭು ಕುಂಜ್ ನಿವಾಸದಲ್ಲಿ ಲತಾಜಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

Share

ಗಾನ ಕೋಗಿಲೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಗಲಿಕೆ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಚಿತ್ರರಂಗ ಸೇರಿ ಬಹುತೇಕ ಎಲ್ಲಾ ಕ್ಷೇತ್ರದವರು ಲತಾಜಿ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಪೆÇೀಸ್ಟ್‍ಗಳನ್ನು ಹಾಕುತ್ತಿದ್ದಾರೆ. ಕೆಲವರು ಲತಾಜಿ ಕಂಠದಲ್ಲಿ ಮೂಡಿಬಂದ ಹಾಡಿನಲ್ಲಿ ತಮ್ಮಿಷ್ಟದ ಹಾಡು ಯಾವುದು ಎನ್ನುವ ಬಗ್ಗೆ ಸ್ಮರಣೆ ಮಾಡಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ಇನ್ನು ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ಪ್ರಭು ಕುಂಜ್‍ಗೆ ಕೊಂಡೊಯ್ಯಲಾಗಿದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಸಂಜೆಯವರೆಗೆ ಅವರ ಪಾರ್ಥಿವ ಶರೀರ ಅವರ ನಿವಾಸದಲ್ಲೇ ಇರಲಿದೆ. ಇಂದು ಸಂಜೆ 6.30ಕ್ಕೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾಜಿ ಅಂತ್ಯಕ್ರಿಯೆ ನೆರವೇರಲಿದೆ.

Tags:

error: Content is protected !!