Chikkodi

ಯಡೂರು ಕೃಷ್ಣಾನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Share

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಮಹಿಳೆಯು ತನ್ನ ಬ್ಯಾಗ ಹಾಗೂ ಚಪ್ಪಲಿಯನ್ನು ನದಿಯ ದಡದಲ್ಲಿ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಆತ್ಮಹತ್ಯೆಯನ್ನು ಮಾಡಿಕೊಂಡ ಮಹಿಳೆಯು ನಿನ್ನೆ ರಾತ್ರಿ ೮ ಗಂಟೆಯವರೆಗೆ ನದಿಯ ದಡದಲ್ಲಿ ಕುಳಿತುಕೊಂಡಿದ್ದಳು ಎಂದು ಸ್ಥಳೀಯರು ಇನ್‌ನ್ಯೂಸ್‌ಗೆ ಮಾಹಿತಿಯನ್ನು ನೀಡಿದ್ದಾರೆ. ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!