ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.
ಹೌದು ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2019ರಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಇದಕ್ಕೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಳಿಸಲಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂಡಂತಾಗಿದೆ. ಇದರಿಂದ ಮಾಜಿ ಸಚಿವ ವಿನಯ ಕುಲಕರ್ಣಿಗೆ ಭಾರೀ ಹಿನ್ನೆಡೆ ಉಂಟಾಗಿದೆ. ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ವಿನಯ್ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಬೆಂಗಳೂರು ಹೈಕೋರ್ಟ್ ಆದೇಶ ಎತ್ತಿ ಹಿಡಿದಿತ್ತು. ಹೈಕೋರ್ಟ್‍ನ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ವಿನಯ್‍ಗೆ ಈಗ ಸುಪ್ರೀಂ ಕೋರ್ಟ್‍ನಲ್ಲಿಯೂ ಹಿನ್ನೆಲೆ ಉಂಟಾಗಿದ್ದರಿಂದ ತೀವ್ರ ನಿರಾಸೆಯಾಗಿದೆ.