ಇಂದು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದರು.

ಇದೇ ವೇಳೆ ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಿಎಂ ಬೊಮ್ಮಾಯಿ ನೀಡಿದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.