State

ರಮೇಶ್ ಜಾರಕಿಹೊಳಿಗೆ ಎಸ್‍ಐಟಿ ಕ್ಲೀನ್ ಚಿಟ್: ಮತ್ತೆ ದಕ್ಕಲಿದೆಯಾ ಮಂತ್ರಿ ಭಾಗ್ಯ..?

Share

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್‍ಐಟಿ ಕ್ಲೀನ್ ಚಿಟ್ ಸಿಗುತ್ತಿದ್ದಂತೆ ಮತ್ತೆ ರಮೇಶ್ ಜಾರಕಿಹೊಳಿ ಮಂತ್ರಿಯಾಗುತ್ತಾರೆ ಎನ್ನುವ ಚರ್ಚೆಗಳು ಈಗ ಕಮಲ ಪಾಳಯದಲ್ಲಿ ಶುರುವಾಗಿದೆ. ಇನ್ನು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕೂಡ ಹೆಚ್ಚಾಗಿವೆ ಎಂದು ಅವರ ಆಪ್ತ ಮೂಲಗಳಿಂದಲೇ ಕೇಳಿ ಬಂದಿವೆ.

ಇತ್ತೀಚೆಗಷ್ಟೆ ಮಾಜಿಸ ಸಚಿವ ರಮೆಶ್ ಜಾರಕಿಹೊಳಿಗೆ ಎಸ್‍ಐಟಿ ಕ್ಲೀನ್ ಚಿಟ್ ನೀಡಿದೆ. ರಾಜ್ಯಾದ್ಯಂತ ಈಗಾಗಲೇ ಸಚಿವ ಸ್ಥಾನ ಹಂಚಿಕೆ ಕುರಿತಂತೆ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ರಮೇಶ್ ಜಾರಕಿಹೊಳಿಗೆ ಸಚವ ಸ್ಥಾನ ಸಿಗುತ್ತಾ ಎನ್ನುವ ಚರ್ಚೆಗಳು ಈಗ ಕಮಲ ಪಾಳಯದಲ್ಲಿ ಕೇಳಿಬರುತ್ತಿವೆ. ಈಗ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮಂತ್ರಿ ಸ್ಥಾನ ರಮೇಶ್ ಜಾರಕಿಹೊಳಿಯವರಿಗೆ ಸಿಗುವ ಸಾಧ್ಯತೆ ಕಂಡುಬರುತ್ತಿವೆ. ಇನ್ನು ಮಂತ್ರಿ ಸ್ಥಾನ ನೀಡುವ ಕುರಿತಂತೆ ರಮೇಶ್ ಜಾರಕಿಹೊಳಿ ಬಿಜೆಪಿ ವರಿಷ್ಟರು ಹಾಗೂ ರಾಜ್ಯ ಬಜೆಪಿ ನಾಯಕರೊಂದಿಗೆ ಸಾಕಷ್ಟು ಚರ್ಚೆ ನಡೆಸಿದ್ದಾರೆ ಎನ್ನುವ ಮಾತುಗಳು ರವರ ಆಪ್ತ ಮೂಲಗಳಿಂದಲೇ ಕೇಳಿ ಬರುತ್ತಿವೆ. ಮಂತ್ರಿ ಸ್ಥಾನಕ್ಕಾಗಿ ಈ ಹಿಂದೆಯೇ ರಮೇಶ್ ಜಾರಕಿಹೊಳಿ ಹಿರಿಯ ನಾಯಕರ ಮೂಲಕ ಸಾಕಷ್ಟು ಲಾಭಿಯನ್ನು ಕೂಡ ನಡೆಸಿದ್ದರು.

ಈ ಹಿಂದೆ ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಿಲಾದ ಅಶ್ಲೀಲ ಸಿಡಿ ಬಿಡುಗಡೆಯಾಗಿತ್ತು. ಆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಮೇಶ ಜಾರಕಿಹೊಳಿ ಈ ಹಿಂದೆ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈಗ ಆ ಕೇಸ್‍ನಲ್ಲಿ ಎಸ್‍ಐಟಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಿದೆ. ಈಗ ಸಚಿವ ಸಂಪುಟ ವಿಸ್ತರಣೆಯಾಗಿತ್ತಿರುವ ಹಿನ್ನೆಲೆಯಲ್ಲಿ ತಮಗೂ ಮಂತ್ರಿ ಸ್ಥಾನ ನೀಡುವಂತೆ ಬಿಜೆಪಿ ಹಿರಿಯ ನಾಯಕರಲ್ಲಿ ರಮೇಶ ಜಾರಕಿಹೊಳಿ ಕೇಳಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಇದಕ್ಕೆ ಪುಷ್ಠಿ ನೀಡುವಂತೆ ಈ ಮೊದಲೇ ರಮೇಶ್ ಜಾರಕಿಹೊಳಿ ಹೈಕಮಾಂಡ್‍ಗೆ ಆಪ್ತರಾಗಿರುವವರ ಜೊತೆ ಸಂಪರ್ಕ ಮಾಡಿದ್ದು, ಹಾಗೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು. ಈ ಹಿನ್ನೆಲೆ ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿಯಾಗುತ್ತಾರೆ ಎನ್ನುವ ಮಾತುಗಳು ಈಗ ಅವರ ಆಪ್ತ ಮೂಲಗಳಿಂದಲೇ ಕೇಳಿಬರುತ್ತದೆ.

Tags:

error: Content is protected !!