State

ರಾಜ್ಯದಲ್ಲಿ ಬೆಂಕಿ ಹಚ್ಚಿದ್ದೇ ಆರ್‍ಎಸ್‍ಎಸ್: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ..!

Share

ಆರ್‍ಎಸ್‍ಎಸ್‍ನವರು ಎಲ್ಲ ಕಡೆ ಬೆಂಕಿ ಹಚ್ಚಿದ್ದಾರೆ. ಈಗ ಬೆಂಕಿ ನಂದಿಸುವುದೇ ಕಷ್ಟದ ಕೆಲಸ ಆಗಿದೆ. ಸಮವಸ್ತ್ರದ ನೆಪದಲ್ಲಿ ದ್ವೇಷದ ಭಾವನೆ ಹುಟ್ಟು ಹಾಕುವ ಜೊತೆಗೆ ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಕೇಸರಿ ಶಾಲು ಹಾಕಿಸಿದ್ದು ಯಾರು ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜನರು ಕಷ್ಟ ಎದುರಿಸಬೇಕಾಗಿದೆ. ಅವರು ಭಾವನಾತ್ಮಕ ವಿಚಾರ ಜನರ ಮುಂದಿಟ್ಟು ಜನರಿಗೆ ಧರ್ಮ, ಜಾತಿಯ ನಶೆ ಅಂಟಿಸಿದ್ದಾರೆ. ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು ನಿಂತಿವೆ. ಭ್ರμÁ್ಟಚಾರ ಮುಗಿಲು ಮುಟ್ಟಿದೆ. ಇವರು ದೇಶವನ್ನು ಲೂಟಿ ಹೊಡೆಯುತ್ತಿದ್ದಾರೆ. ಅದನ್ನು ಮುಚ್ಚಿಹಾಕಲು ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜನರು ಸಂಕಷ್ಡ ಎದುರಿಸಬೇಕಾಗಿದೆ. ಕಾಂಗ್ರೆಸ್ ಮುಂದೆ ದೊಡ್ಡ ಸವಾಲಿದೆ. ದೇಶ ಉಳಿಸಬೇಕಾಗಿದೆ, ಸಂವಿಧಾನ ರಕ್ಷಣೆ ಮಾಡಬೇಕಾಗಿದೆ. ದೇಶ ಆರ್ಥಿಕವಾಗಿ ದಿವಾಳಿ ಆಗುತ್ತಿದೆ. ಇದನ್ನು ತಡೆಗಟ್ಟಬೇಕಾದ್ದು ನಮ್ಮೆಲ್ಲರ ಜವಾಬ್ದಾರಿ. ಯುವಜನರ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಕಳೆದ ಏಳೆಂಟು ವರ್ಷಗಳಲ್ಲಿ ಬಿಜೆಪಿ ಜನಪರವಾಗಿ ಏನೂ ಕೆಲಸ ಮಾಡಿಲ್ಲ, ನುಡಿದಂತೆ ನಡೆಯಲಿಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಧರ್ಮ ಜಾತಿಯ ನಶೆಯನ್ನು ಅಂಟಿಸಿದ್ದಾರೆ. ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಸಹ ಕಳೆದ ಎರಡೂವರೆ ವರ್ಷಗಳಿಂದ ಏನೂ ಮಾಡಲಿಲ್ಲ. ಅಭಿವೃದ್ಧಿ ನಿಂತಿದೆ, ಭ್ರμÁ್ಟಚಾರ ಮುಗಿಲು ಮುಟ್ಟಿದೆ. ದೇಶವನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇನ್ನು ಹಿಜಾಬ್ ಎನ್ನುವುದು ಗಲಾಟೆ ಮಾಡುವ ವಿಷಯ ಖಂಡಿತ ಅಲ್ಲ. ಹಲವು ವರ್ಷಗಳಿಂದ ಮುಸ್ಲಿಂ ಯುವತಿಯರು ಹಿಜಾಬ್ ಧರಿಸುತ್ತಿದ್ದಾರೆ. ಈಗ ಇದ್ದಕ್ಕಿದ್ದಂತೆ ಇದನ್ನು ವಿವಾದ ಮಾಡಲಾಗಿದೆ. ಹಿಂದೂ ಧರ್ಮ ಗಟ್ಟಿಗೊಳಿಸಿ ಮತ ಕ್ರೋಡೀಕರಣಕ್ಕಾಗಿ ಈ ಬೆಳವಣಿಗೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಕೇಸರಿ ಶಾಲನ್ನು ವಿದ್ಯಾರ್ಥಿಗಳು ಖರೀದಿಸಿ ಹಾಕಿಕೊಂಡಿಲ್ಲ. ಸಂಘ ಪರಿವಾರದವರೇ ಅದನ್ನು ಖರೀದಿಸಿ ನೀಡಿದ್ದಾರೆ. ಒತ್ತಾಯದಿಂದ ಕೇಸರಿ ಶಾಲು ಹಾಕಿ ಕಳಿಸಿದ್ದಾರೆ. ಸಮವಸ್ತ್ರದ ಹೆಸರಲ್ಲಿ ದ್ವೇಷದ ಭಾವನೆ ಹುಟ್ಟಿಸುವುದು ಇವರ ಉದ್ದೇಶ. ನಮ್ಮ ಯುವಕರು ಸಂವಿಧಾನವನ್ನು ಸರಿಯಾಗಿ ಓದಿಕೊಳ್ಳಬೇಕು.

ನರೇಂದ್ರ ಮೋದಿಯಿಂದ ನಾವು ದೇಶಭಕ್ತಿ ಕಲಿಬೇಕಾಯ್ತಲ್ಲ ಎಂಬ ವ್ಯಥೆ ನಮಗಿದೆ. ನರೇಂದ್ರ ಮೋದಿ ಹುಟ್ಟಿದ್ದೇ ಸ್ವಾತಂತ್ರ್ಯ ಬಂದ ಮೇಲೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಆದರೆ ಮೋದಿ ಅವರಿಗೆ ಇಷ್ಟು ವಯಸ್ಸು ಆಗಿಲ್ಲ. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ರಕ್ಕಾಗಿ ಪ್ರಾಣ ಕಳೆದುಕೊಂಡಿದ್ದಾರಾ, ಆಸ್ತಿ ಕಳೆದಿಕೊಂಡಿದ್ದಾರಾ ಎಂದು ಪ್ರಶ್ನಿಸಿದರು. ಯಾವುದಾದರೂ ರಾಜಕೀಯ ಪಕ್ಷ ದೇಶಕ್ಕೋಸ್ಕರ ಪ್ರಾಣ, ಆಸ್ತಿಪಾಸ್ತಿ ಕಳೆದುಕೊಂಡಿದ್ರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗಿದರು.

Tags:

error: Content is protected !!