Ramdurg

ರಾಮದುರ್ಗ ಹಾಸ್ಟೇಲ್ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share

ವಸತಿ ನಿಲಯದಲ್ಲಿ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಮದುರ್ಗದಲ್ಲಿ ಸಂಭವಿಸಿದೆ.

ರಾಮದುರ್ಗ ಪಟ್ಟದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ಹಾಸ್ಟೆಲ್ ಇದಾಗಿದೆ 13 ಜನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು. ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ದಾಖಲಿಸಲಾಗಿದೆ. ನಾಲ್ವರು ವಿದ್ಯಾರ್ಥಿನಿಯರಿಗೆ ರಾಮದುರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಮದುರ್ಗ ತಹಶಿಲ್ದಾರ್ ಮಾಹಿತಿ ನೀಡಿದ್ದಾರೆ.
ಇನ್ನು ಹಾಸ್ಟೆಲ್ ನಲ್ಲಿನ ಊಟದ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಊಟ ಸರಿಯಾಗಿ ಕೊಡಲ್ಲ ಎಂದು ವಿದ್ಯಾರ್ಥಿನಿಯರ ಆರೋಪಿಸಿದ್ದಾರೆ.

Tags:

error: Content is protected !!