State

ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ ದೇಶಾಧ್ಯಂತ 2 ದಿನ ಶೋಕಾಚರಣೆ

Share

ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಲತಾ ಮಂಗೇಶ್ಕರ್ ನಮ್ಮನ್ನಗಲಿದ್ದಾರೆ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ಸ್ಪಷ್ಟಪಡಿಸಿದ್ದಾರೆ.

ಲತಾ ಮಂಗೇಶ್ಕರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ನಿರ್ಧರಿಸಲಾಗಿದೆ. ಲತಾ ಮಂಗೇಶ್ಕರ್ ಅವರ ದೇಹವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಶಿವಾಜಿ ಪಾರ್ಕ್‍ಗೆ ತೆಗೆದುಕೊಂಡು ಹೋಗಲು ಸಿದ್ಧತೆಗಳು ನಡೆಯುತ್ತಿವೆ. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

Tags:

error: Content is protected !!