ವಿಜಯಪುರದಲ್ಲಿ ಹಿಜಾಬ್ ಗದ್ದಲ ಮುಂದುವರೆದಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿನಿಯರು ಹಾಗೂ ಪೋಷಕರ ಪ್ರತಿಭಟನೆ ನಡೆಸಿದರು.

ಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿನಿ ಯರು ಹಾಗೂ ಪೋಷಕರು, ಮುಖಂಡರು ಭಾಗಿಯಾದ್ದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ ಪ್ರತಿಭಟನಾಕಾರರು ಹಿಜಾಬ್ ಗೆ ಅವಕಾಶ ಕೊಡುವಂತೆ ಮನವಿ ಸಲ್ಲಿಸಿದರು.
