ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಸೃಸ್ಟಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಲ್ಲಿ ವಿಷಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಇದು ಖಂಡನೀಯ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿಚಾರದಲ್ಲಿ ವಿವಾದಗಳನ್ನು ಸೃಷ್ಟಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ವಿಷಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಇದು ಬಹಳ ದುರದೃಷ್ಟಕರ ಸಂಗತಿ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಸಮವಸ್ತ್ರ ಧರಿಸಿ ಹೋಗೋದು ಮೊದಲಿನಿಂದ ಬಂದ ಪದ್ಧತಿ. ಸಮವಸ್ತ್ರ ಅಂದ್ರೆ ಏನು ಎಂಬುದು ಹೆಸರಲ್ಲೇ ಗೊತ್ತಾಗುತ್ತೆ.

ಶಾಲೆಗಳಲ್ಲಿ ಎಲ್ಲರೂ ಸಮಾನವಾಗಿ ಯೋಚನೆ ಮಾಡಬೇಕು. ಜಾತಿ ವಿಚಾರ ಬರಬಾರದು, ಹಿಂದೂ ಮುಸ್ಲಿಂ ಅನ್ನೋದು ಬರಬಾರದು. ಶಾಲಾ ಕಾಲೇಜು ಆವರಣಕ್ಕೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಗಳಾಗಿರಬೇಕು. ಹಿಜಾಬ್ ವಿಚಾರದಲ್ಲಿ ವಿಶೇಷವಾಗಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಲ್ಲಿ ವಿಷಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡ್ತಿದೆ, ಇದು ಖಂಡನೀಯ. ವಿರೋಧ ಪಕ್ಷದವರು ಇದನ್ನ ಬಿಟ್ಟು, ದೂರ ಉಳಿದರೆ ಒಳ್ಳೆಯದು ಎಂದರು.
ಚುನಾವಣಾ ವರ್ಷದಲ್ಲಿ ಅಭಿವೃದ್ಧಿ ಕೆಲಸ ಇಲ್ಲದೇ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ಆರೋಪ ವಿಚಾರ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ, ಕೇಂದ್ರದಲ್ಲಿ ಯಾವ ರೀತಿ ಅಭಿವೃದ್ಧಿ ಕೆಲಸ ಆಗ್ತಿದೆ ಮುಂದಿನ ಚುನಾವಣೆಯಲ್ಲಿ ಜನ ತೀರ್ಮಾನ ಮಾಡ್ತಾರೆ. ಕೇಂದ್ರ, ರಾಜ್ಯ ಸರ್ಕಾರದ ಸಾಧನೆ ಆಧಾರ ಮೇಲೆ ಚುನಾವಣೆ ಎದುರಿಸುತ್ತೇವೆ. ಹಿಜಾಬ್ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡುವ ದರ್ದು ಬಿಜೆಪಿಗಿಲ್ಲ. ಹಿಜಾಬ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿರುವುದು ಕಾಂಗ್ರಸ್ ಪಕ್ಷದವರು. ಇದರಲ್ಲಿ ಬಿಜೆಪಿ ಮೂಗು ತೂರಿಸುವಂತಹ ಪ್ರಶ್ನೆಯೇ ಇಲ್ಲ.
ಇದೇ ಸಂದರ್ಭದಲ್ಲಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ ಬಿ.ವೈ ವಿಜಯೆಂದ್ರರವರು, ಸಮವಸ್ತ್ರ ವಿಚಾರದಲ್ಲಿ ಯಾವತ್ತೂ ಈ ರೀತಿ ಗೊಂದಲ ಇರಲಿಲ್ಲ. ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ದೇಶಾದ್ಯಂತ ಗೊಂದಲ ಸೃಷ್ಟಿಸುವ ಕೆಲಸ ವಿಪಕ್ಷಗಳು ಮಾಡ್ತಿವೆ. ಶಾಲಾ ಕಾಲೇಜುಗಳ ಮಕ್ಕಳು ಯಾರೂ ತಲೆ ಕೆಡಿಸಿಕೊಳ್ಳಬಾರದು. ಶಾಲಾ ಆವರಣ ಅಂದ್ರೆ ಎಲ್ಲಾ ಧರ್ಮ, ಸಮುದಾಯದ ಮಕ್ಕಳು ಒಂದೇ ಬೇಂಚ್‍ನಲ್ಲಿ ಕುಳಿತು ಪಾಠ ಕೇಳಬೇಕು. ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿರೋದಕ್ಕೆ ತಲೆ ಕೆಡಿಸಿಕೊಳ್ಳಬಾರದು. ವಿದ್ಯಾರ್ಥಿಗಳೆಲ್ಲರೂ ಸಮನಾಗಿ ಕುಳಿತುಕೊಂಡು ಪಾಠ ಕಲಿಯಬೇಕು ಎಂದರು.