Politics

ಸಂಜೆಯೊಳಗೆ ದೆಹಲಿ ಪ್ರವಾಸಕ್ಕೆ ಸಮಯ ನಿಗದಿ: ಸಿಎಂ ಬೊಮ್ಮಾಯಿ

Share

ಕೇಂದ್ರ ಬಜೆಟ್ ಆಗಿದ್ದು,ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಅಂತರರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ರಾಜ್ಯದ ಮುಂದಿನ ನಡೆಯ ಬಗ್ಗೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಕೇಂದ್ರ ಹಣ ಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ ಟಿ ,ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೋರಲಾಗಿದ್ದು, ಸಂಜೆಯೊಳಗೆ ಭೇಟಿಯ ಸಮಯ ನಿಗದಿಯಾಗಲಿದೆ ಎಂದು ತಿಳಿಸಿದರು.

Tags:

error: Content is protected !!