State

ಸಂಪುಟ ಸಭೆಯಲ್ಲಿ ಹಿಜಾಬ್-ಕೇಸರಿ ವಿವಾದ ಚರ್ಚೆ ಆಗಲಿಲ್ಲವಂತೆ..!

Share

ಉಡುಪಿಯಲ್ಲಿ ತಲೆ ಎತ್ತಿದ್ದ ಹಿಜಾಬ್ ವಿವಾದ ಮತ್ತು ತದನಂತರ ವಿವಾದ ಹೈಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ವಿವಾದ ಕುರಿತು ಇದೀಗತಾನೆ ನಡೆಸ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ.

ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಿತು. ಹಿಜಾಬ್ ವಿವಾದ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ಬೇಡ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಟ್ಟ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಸಭೆಯಲ್ಲಿ ವಿವಾದದ ವಿಚಾರವಾಗಿ ಯಾವುದೇ ಗಂಭೀರ ಚರ್ಚೆ ನಡೆಯಲಿಲ್ಲ. ಇನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಂಡಿರುವ 28.63 ಕೋಟಿ ರೂಪಾಯಿ ಮೊತ್ತದ 6 ರಸ್ತೆ ಕಾಮಗಾರಿ ಸ್ಥಳ ಬದಲಾವಣೆ ಮಾಡಲು ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.

ಕೆಪಿಎಸ್‍ಸಿ 2011ರ ಅಭ್ಯರ್ಥಿ ಆಯ್ಕೆ ಗೊಂದಲ ವಿಚಾರ ನೇಮಕಾತಿ ಸಂಬಂಧ ಮಸೂದೆ ಮಂಡನೆ ಮಾಡಲು ತೀರ್ಮಾನ. ಏPSಅ ನೋಟಿಫೈ ಮಾಡಿದ್ದ ಪಟ್ಟಿ ಒಪ್ಪಲು ಸಂಪುಟ ತೀರ್ಮಾನಿಸಿದೆ. ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ, 2022ಕ್ಕೆ ಅನುಮೋದನೆ ಸಿಕ್ಕಿದೆ. ವಿಜಯಪುರ ಪಾಲಿಕೆಯಲ್ಲಿ ದೀರ್ಘಾವಧಿ ಗುತ್ತಿಗೆಗೆ ನೀಡಿರುವ ಆಸ್ತಿಗಳ ಪೈಕಿ ಉಳಿದ 366 ಲೀಸ್ ಆಸ್ತಿಗಳ ಖರೀದಿಗೆ ಮಂಜೂರಾತಿ ನೀಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ದರಕ್ಕೆ ಬಡ್ಡಿ ಮೊತ್ತ ಸೇರಿಸಿ ಖರೀದಿ ನಡೆಯಲಿದೆ. ಮಾಸ್ತಿಯಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ 17.00 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೆಚ್ಚಿನ ಮಾಹಿತಿ ಕೊಟ್ಟಿದ್ದಾರೆ.

 

Tags:

error: Content is protected !!