Athani

ಸರಕಾರಿ ಮರಾಠಿ ಶಾಲೆಯಲ್ಲಿ ಕಳ್ಳತನ ಸಾವಿರಾರು ರೂ ಮೌಲ್ಯದ ವಸ್ತುಗಳನ್ನು ಕದ್ದ ಖದೀಮರು

Share

ಸರಕಾರಿ ಮರಾಠಿ ಪ್ರಾಥಮಿಕ ಶಾಲೆ ಬಾಗಿಲು ಕೀ ಒಡೆದು ಕಳ್ಳತನ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ.

ಸಂಬರಗಿ ಗ್ರಾಮದ ಸರಕಾರಿ ಮರಾಠಿ ಶಾಲೆಗೆ ಕನ್ನ ಹಾಕಿದ ಖದೀಮರು, ಸಾವಿರಾರು ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಕಂಪ್ಯೂಟರ್ ಪ್ರಿಂಟರ್ ಸೇರಿದಂತೆ ಶಾಲೆ ದಾಖಲಾತಿ ಕಳ್ಳತನ ಮಾಡಿದ್ದಾರೆ.

ಈ ಹಿಂದೆ ಗ್ರಾಮದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಜ್ಞಾನ ದೇಗುಲ ಮೇಲೆ ಕಣ್ಣು ಹಾಕಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ವ್ಯಕ್ತವಾಗಿದೆ. ಅಥಣಿ ಪೆÇಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Tags:

error: Content is protected !!