ನಮ್ಮ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಆಗಿದ್ದಾರೆ. ಸಿಎಂ ಬೊಮ್ಮಾಯಿಗೆ 6 ತಿಂಗಳ ಅವಕಾಶ ಕೊಟ್ಟಿದ್ದಾರೆ. ಸಿಎಂ ಮಾಡುವಾಗಲೇ 6 ತಿಂಗಳು ಎಂದು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಷರತ್ತು ಹಾಕಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರಮಾಣವಚನಕ್ಕೆ ಅವಕಾಶ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈ ಬಾರಿಯೂ ಮೂವರು ಸಿಎಂಗಳು ಆಗಲಿದ್ದಾರೆ ಎಂದು ಎಂದು ಛೇಡಿಸಿದರು.

ಇನ್ನು ಕಾಂಗ್ರೆಸ್‍ನಲ್ಲಿ ಯಾವುದೇ ಬಣಗಳು ಇಲ್ಲ. ಸಿಎಂ ಆಗುವ ಸಾಮಥ್ರ್ಯ ನಾಲ್ಕೈದು ನಾಯಕರಿಗಿದೆ. ನನ್ನನ್ನು ಬಿಟ್ಟು ನಮ್ಮಲ್ಲಿ 4-5 ನಾಯಕರಿಗೆ ಸಾಮಥ್ರ್ಯವಿದೆ ಎಂದರು.