ವಸ್ತ್ರೋದ್ಯಮ ಸಂಘಟನೆಗಳ ಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ವಸ್ತ್ರೋದ್ಯಮ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಉದ್ಯಮದ ಪ್ರಗತಿ ಸುದೀರ್ಘವಾಗಿ ಚರ್ಚಿಸಿದರು. ಈ ವೇಳೆ ಎಫ್‍ಕೆಟಿಎ ಅಧ್ಯಕ್ಷ ಪ್ರಕಾಶ್ ಮಂಡೋತ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‍ಎನ್ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.
