ಹಿಜಾಬ್ ಮತ್ತು ಕೇಸರಿ ವಿವಾದ ಭುಗಿಲೆದ್ದಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿಗಳು ಮೊದಲ ಹಂತದಲ್ಲಿ ಸೋಮವಾರದಿಂದ 10ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. 2ನೇ ಹಂತದಲ್ಲಿ ಪಿಯುಸಿ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ. ನಾಳೆ ಸಂಜೆÉ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುವೆ. ಜಿಲ್ಲಾಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸೂಚನೆ ಕೊಡುತ್ತೇನೆ. ಅಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿ ಇರುತ್ತೇನೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.