ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.