ಧಮ್ ಇದ್ದರೆ ಮಸೀದಿ ಒಳಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ ಎಂದು ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂಬ ಶಾಸಕಿ ಖನೀಜಾ ಫಾತಿಮಾ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದರು. ನಾವು ಶಾಲೆಗೆ ಮಾತ್ರ ಹಿಜಬ್ ನಿμÉೀಧಿಸಿದ್ದೇವೆ. ಹೊರಗಡೆಗೆ ನಿμÉೀಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದು ತಿರುಗೇಟು ನೀಡಿದರು.
ಹಿಜಾಬ್ ಬಗ್ಗೆ ಎಂಎಲ್‍ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಾಬ್ ತೆಗೆಯಬೇಕಾ..? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿμÉೀಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.
ಇನ್ನೂ 3 ತಿಂಗಳು ಸಚಿವ ಸಂಪುಟ ವಿಸ್ತರಣೆ ಇಲ್ಲ. ಪಂಚರಾಜ್ಯ ಚುನಾವಣೆ ಮುಗಿಯುವವರಿಗೆ ವಿಸ್ತರಣೆ ಇಲ್ಲ. ಈ ಬಗ್ಗೆ ನನಗೆ ಹೈಕಮಾಂಡ್ ನಾಯಕರು ಹೇಳಿಲ್ಲ. ಖುದ್ದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.
ಒಟ್ಟಿನಲ್ಲಿ ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಈಶ್ವರಪ್ಪ ತೀವ್ರ ವಾಗ್ದಾಳಿ ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಯಾವ ರೀತಿ ತಿರುಗೇಟು ನೀಡುತ್ತಾರೆ ಎಂದು ಕಾದು ನೋಡಬೇಕಿದೆ.