ಹಿಜಾಬ್ ವಿವಾದದ ವಿಚಾರಣೆಯನ್ನು ಹೈಕೋರ್ಟ ತ್ರಿದಸ್ಯ ಪೀಠ ನಾಳೆಗೆ ಮುಂದೂಡಿದೆ.
ಹೌದು ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ಆದರೆ ಈ ವಿವಾದದ ಬಗ್ಗೆ ಸದ್ಯ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ಮತ್ತೆ ವಿಚಾರಣೆ ಮಾಡಲಾಗಿದ್ದು, ವಾದ ಪ್ರತಿವಾದದ ಬಳಿಕ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಕಾಲೇಜು ಅಭಿವೃದ್ದಿ ಸಮಿತಿಗೆ ಕಾಯ್ದೆಯಡಿ ಅಧಿಕಾರವಿಲ್ಲ. ಹೀಗಾಗಿ ಸಮವಸ್ತ್ರ ಜಾರಿ ಅಧಿಕಾರ ಸಮಿತಿಗೆ ನೀಡಲು ಸಾಧ್ಯವಿಲ್ಲ ಎಂದು ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ವಾದಮಂಡನೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ.
