ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಯಾವುದೇ ಶಾಲು ಅಥವಾ ಹಿಜಾಬ್ ಧರಿಸದೇ ಕೇವಲ ಸಮವಸ್ತ್ರವನ್ನು ಮಾತ್ರ ಧರಿಸಬವೇಕೆಂಬ ನ್ಯಯಾಲಯದ ಆದೇಶವಿದ್ದರೂ ಬೆಳಗಾವಿಯಲ್ಲಿ ಹಿಜಬ್ ಧರಸಿ ಕೆಲ ವಿದ್ಯಾರ್ಥಿಗಳು ಕಾಲೇಜು ಆವರಣ ಪ್ರವೇಶಿಸಿದರು. ಬೆಳಗಾವಿ ಲಂಗರಾಜ್ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹಿಜಾಬ್‍ನ್ನು ಧರಿಸಿಯೇ ಕಾಲೇಜಿನ ಆವರಣವನ್ನು ಪ್ರವೇಶಿಸಿದ್ದಾರೆ. ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಹಿಜಬ್‍ನ್ನು ತೆಗೆದು ತರಗತಿ ಪ್ರವೇಶ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನ ಗೇಟ್ ಬಳಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಈ ವೆಳೆ ಕೆಲ ವಿದ್ಯಾರ್ಥಿಗಳು ಜಿಜಾಬ್ ತೆರೆಯುವ ವಿಚಾರವಾಗಿ ಕಾಲೇಜು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ನಮ್ಮ ಹಿಜಾಬ್ ನಮ್ಮ ಹಕ್ಕು. ಇದನ್ನು ನಮ್ಮಿಂದ ಯಾರೂ ಕೂಡ ಕಸಿದುಕೊಳ್ಳಲಾಗುವುದಿಲ್ಲ. ನಾವು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.
ಇನ್ನ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕ್ಯಾಂಪ್ ಪೊಲೀಸ್ ಠಾಣಾ ಸಿಪಿಐ ಪ್ರಭಾಕರ್ ಧರಮಟ್ಟಿ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಂತಗೊಳಿಸಿದರು. ವಿದ್ಯಾರ್ಥಿಗಳ ಮನವೊಲಿಸಿ ಪಾಲಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಆದೇಶ ಪಾಲಿಸುವಂತೆ ಮನವಿ ಮಾಡಿದರು. ಇನ್ನು ಸ್ಥಳದಲ್ಲಿ ಬಿಗಿ ಪೊಲೀಸ್ ಬಮದೋಬಸ್ತ್ ಮಾಡಲಾಗಿದೆ.