ನ್ಯಾಯಾಲಯದ ಸೂಚನೆಯ ನಂತರವೂ ಹಿಜಾಬ್ ಧರಿಸಿ ಬರುವುದು ತಪ್ಪಾಗುತ್ತದೆ. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರಲು ಬಿಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಎಚ್ಚರಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ. ಆದರೆ ಹಿಜಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ. ಕಾನೂನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು. ಹೈಕೋರ್ಟ್ ಸೂಚನೆಯ ನಡುವೆಯೂ ಹಿಜಬ್ ಧರಿಸಿ ಬರುವುದು ಸರಿಯಲ್ಲ ಎಂದರು.
ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಶಾಲಾ-ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ, ಆರೋಪ ಮಾಡಿ ಗೊಂದಲ ನಿರ್ಮಾಣ ಮಾಡುವುದು ಬೇಡ. ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭವಾಗಲಿವೆ ಎಂದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅಶ್ವತ್ಥನಾರಾಯಣ ಸಿದ್ದರಾಮಯ್ಯ ಆರ್ಥಿಕ ತಜ್ಞರು. ಅವರ ಕಾಲದಲ್ಲಿ ಎμÉ್ಟಷ್ಟು ಸಾಲ ಮಾಡಿದ್ದಾರೆ. ಸಮಾಜದ ಮೇಲೆ ಎμÉ್ಟಷ್ಟು ಸಾಲದ ಭಾರ ಹೊರಿಸಿದ್ದಾರೆ ಎಂಬುದರ ಬಗ್ಗೆ ಅವರು ಮಾತನಾಡಬೇಕು. ಸಿದ್ದರಾಮಯ್ಯ ತಮ್ಮ ಬೆನ್ನನ್ನು ನೋಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.