ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ವಿವಾದ ಇಷ್ಟಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದೂ ಸಹ ವಿವಾದ ಭುಗಿಲೆದ್ದಿದ್ದು. ಬನಹಟ್ಟಿ ಪಟ್ಟಣದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಕ್ಯಾಂಪಸ್ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದೆ. ಇದರಿಂದ ಬನಹಟ್ಟಿಯಲ್ಲಿ ಪ್ರಕ್ಷುಬ್ದ ವಾತಾವಾರಣ ನಿರ್ಮಾಣವಾಗಿತ್ತು.

ಹೌದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದೆಡೆ ಕೇಸರಿ ಶಾಲ್ ಹಾಕಿಕೊಂಡು ವಿದ್ಯಾರ್ಥಿಗಳು ಬಂದಿದ್ದರೆ ಇನ್ನೊಂದೆಡೆ ಹಿಜಾಬ ಧರಿಸಿಕೊಂಡು ವಿದ್ಯಾರ್ಥಿಗಳು ಬಂದಿದ್ದರು. ಈ ವೇಳೆ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಕಾಲೇಜಿನ ಒಳಗೆ ನುಗ್ಗಿ ಪ್ರತಿಭಟನೆ ಮಾಡಿದರು. ಹಿಜಾಬ ಧರಿಸಿದವರನ್ನ ಕಾಲೇಜು ಗೇಟ್ ಮುಂದೆಯೇ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಾಲೇಜು ಕ್ಯಾಂಪಸ್ ಮೇಲೆ ತೂರಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಅದೇ ರೀತಿ ಬಾಗಲಕೋಟೆಯ ವಿದ್ಯಾಗಿರಿಯ ಬಸವೇಶ್ವರ ಪಿಯು ಕಾಲೇಜಿನಲ್ಲಿ ಒಂದೆಡೆ ಕೇಸರಿ ಶಾಲ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಗೇಟ್‍ನಲ್ಲಿಯೇ ಕಾಲೇಜ್ ಸಿಬ್ಬಂದಿ ತಡೆದರು. ಇದರಿಂದ ಆಕ್ರೋಶಗೊಂಡ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜ್‍ಗೆ ಬಂದ ವಿದ್ಯಾರ್ಥಿನಿಯರಿಗೆ ಅವಕಾಶ ಕೊಡುತ್ತಿದ್ದಿರಿ ನಮಗ್ಯಾಕೆ ಇಲ್ಲ ಅಂತೀರಿ ಎಂದು ವಾಗ್ವಾದಕ್ಕಿಳಿದರು.
ಘಟನೆ ಬೆನ್ನಲ್ಲೆ ಸ್ಥಳಕ್ಕೆ ದೌಡಾಯಿಸಿದ ಪೆÇಲೀಸರು ಕಾಲೇಜು ಪ್ರಾಚಾರ್ಯರೊಂದಿಗೆ ಮಾತುಕತೆ ನಡೆಸಿ ಕಾಲೇಜ್ ಬಳಿ ಪೊಲೀಸರನ್ನು ನಿಯೋಜಿಸಿದರು. ಈ ವೇಳೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದ ವಿದ್ಯಾರ್ಥಿಗಳು ಮಾತನಾಡಿ ನಾವು ಯಾವುದೇ ರೀತಿ ಗಲಾಟೆ ಮಾಡೋಕೆ ಬಂದಿಲ್ಲ, ಶಾಂತವಾಗಿಯೇ ಇರುತ್ತೇವೆ. ಎಲ್ಲರೂ ಸಮಾನವಾಗಿ ಬರೋವರೆಗೂ ನಾವು ಕೇಸರಿ ಶಾಲು ಧರಿಸುತ್ತೇವೆ. ಎಲ್ಲರಿಗೂ ಒಂದೇ ರೀತಿಯ ಶಿಕ್ಷಣಕ್ಕೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.
ಅದೇ ರೀತಿ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಖಾಸಗಿ ಎಂಬಿಎ ಕಾಲೇಜಿನಲ್ಲಿಯೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರಿಂದ ಮತ್ತೊಂದಿಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಪ್ರಾಧ್ಯಾಪಕರು ಮನವೊಲಿಕೆ ಬಳಿಕ ಹಿಜಾಬ್ ಹಾಗೂ ಕೇಸರಿ ಶಾಲು ತೆಗೆಯಲು ಒಪ್ಪಿದ ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ತರಗತಿಗಳಿಗೆ ಪ್ರವೇಶ ಮಾಡಿದರು.
ಒಟ್ಟಿನಲ್ಲಿ ಹಿಜಾಬ್ ವರ್ಸಸ್ ಕೇಸರಿ ವಿವಾದ ಹಿಂಸಾರೂಪ ತಾಳುತ್ತಿದ್ದರು. ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಇದಕ್ಕೆ ಬ್ರೇಕ್ ಹಾಕುವ ಕೆಲಸ ಮಾಡಬೇಕಿದೆ.