ಹಿಜಾಬ್ ವಿವಾದದ ನಡೆವೆಯೂ ಕಾಲೇಜುಗಳ ಪುನಾರಂಭವಾಗಿದ್ದು, ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ ಘಟನೆ ಇಲ್ಲಿನ ಜೆ.ಸಿ. ನಗರದ ವುಮೇನ್ಸ್ ಕಾಲೇಜಿನ ಆವರಣದಲ್ಲಿ ನಡೆದಿದೆ.

ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳಗೆ ಬನ್ನಿ ಇಲ್ಲದಿದ್ದರೆ ಕಾಲೇಜು ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದನ್ನು ಖಂಡಿಸಿ ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವಿ ವಾಂಟ್ ಜಸ್ಟೀಸ್ ಎಂದು ವಿದ್ಯಾರ್ಥಿಗಳು ಘೋಷಣೆ ಕೂಗಿ, ಕಾಲೇಜು ಎದುರು ಕುಳಿತುಕೊಂಡು ಪ್ರತಿಯೊಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ನಾವು ಹಿಜಾಬ್ ತೆಗೆಯೋಲ್ಲ,, ನಾವು ಹಿಜಾಬ್ ಹಾಕಿಕೊಂಡೆ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು.
ಪ್ರತಿಭಟನಾ ಸಂದರ್ಭದಲ್ಲಿ ಕಾಲೇಜು ಮುಂದೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.