ಹಿಜಾಬ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿದಂತೆ ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವದು ಎಂದು ಪೋಲಿಸ್ ಆಯುಕ್ತ ಡಾ. ಬೋರಲಿಂಗಯ್ಯಾ ಪ್ರಕಟಣೆ ಹೊರಡಿದ್ದಾರೆ.

ಹಿಜಾಬ ಮತ್ತು ಕೇಸರಿ ಶಾಲು ವಿವಾದ ಈಗಾಗಲೇ ಕೋರ್ಟನಲ್ಲಿ ಹೇರಿಂಗ್ ನಡೆಯುತ್ತಿದ್ದು, ಈ ಕುರಿತು ಸಾರ್ವಜನಿಕರು, ವಿದ್ಯಾರ್ಥಿಗಳು ವಾಟ್ಸಪ್ಪ್, ಫೇಸಬುಕ್, ಇನ್ಸ್ಟಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಹೇಳಿಕೆಗಳನ್ನು ಹಾಗೂ ಪೋಸ್ಟರ್ ಗಳನ್ನು ಹಾಕಬಾರದು. ಹಿಜಾಬ ವಿವಾದಕ್ಕೆ ಸಂಬಂಧಪಟ್ಟಂತೆ ಯಾರಾದರೂ ಗುಂಪುಗಾರಿಕೆ, ಗಲಾಟೆ, ದೊಂಬಿ ಇತ್ಯಾದಿಗಳನ್ನು ಮಾಡಿದ್ದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ನಿರ್ಧಾಕ್ಷಿಣ್ಯವಾಗಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು.ಈ ರೀತಿ ಮಾಡುವವರ ಬಗ್ಗೆ ಮಾಹಿತಿ ಇದ್ದಲ್ಲಿ ಕಾನೂನು ಕೈಗೆತ್ತಿಕೊಳ್ಳದೆ ನಿಮ್ಮ ಹತ್ತಿರದ ಪೋಲಿಸ್ ಠಾಣೆಗೆ ದೂರು ನೀಡಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.
