ಖಾನಾಪೂರ ತಾಲೂಕಿನ ಕುಪ್ಪಟಗಿರಿ ಗ್ರಾಮದಲ್ಲಿ ಏತ ನೀರಾವರಿ ಯೋಜನೆಯಡಿಯಲ್ಲಿ ೫.೭೭ ಕೋಟಿ ವೆಚ್ಚದ ಕಾಮಗಾರಿಗೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌ಗುದ್ದಲಿ ಪೂಜೆ ಸಲ್ಲಿಸಿದರು.

ತಾಲೂಕಿನ ಕುಪ್ಪಟಗಿರಿ ಗ್ರಾಮದಲ್ಲಿ ಏತ ನೀರಾವರಿ ಯೋಜನೆ ಅಡಿಯಲ್ಲಿ ೫.೭೭ ಕೋಟಿ ವೆಚ್ಚದಲ್ಲಿ ಪುನಶ್ಚೇತನ ಕಾಮಗಾರಿಗೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು. ಸುಮಾರು ೫೦೦ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕರ ಈ ಮಾದರಿ ಕಾರ್ಯದಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
