ಯಾವುದೇ ಮಗು ಪೆÇಲಿಯೋ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಜನವಸತಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ ವಾಸಿಸುವ ಮಕ್ಕಳಿಗೆ ಲಸಿಕೆ ನೀಡಲು 23 ಮೊಬೈಲ್ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಇಂದು ಆರೋಗ್ಯ ಇಲಾಖೆ ವತಿಯಿಂದ ಕ್ಷಯ ರೋಗ ಮತ್ತು ಫೆಬ್ರುವರಿ 27ರಂದು ಜರಗುವ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ಫೆ.17) ನಡೆದ ಪೂರ್ವಭಾವಿ ಸಭೆಯ ಆಯೊಜಿಸಲಾಗಿತ್ತು. ಕ್ಷಯ ರೋಗದ ಕುರಿತು ಜಿಲ್ಲಾಧಿಕಾರಿ ಮಾತನಾಡಿ ಕೋವಿಡ್ ವರದಿ ನೆಗೆಟಿವ್ ಬಂದರೂ ಕೂಡ ಜನರಿಗೆ ಕೆಮ್ಮು ಬರುತ್ತಿದ್ದು ಅಂತವರಿಗೆ ಟಿಬಿ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡರು.

ನಂತರ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಅವರು ಮಾತನಾಡಿ ಅಲೆಮಾರಿ ಜನಾಂಗ, ಗುಡ್ಡಗಾಡು ನಿವಾಸಿಗಳು ಹಾಗೂ ವಲಸೆ ಕಾರ್ಮಿಕರ ಮಕ್ಕಳು ಸೇರಿದಂತೆ ಯಾವುದೇ ಮಗು ಪೆÇಲಿಯೋ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಜನವಸತಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ ವಾಸಿಸುವ ಮಕ್ಕಳಿಗೆ ಲಸಿಕೆ ನೀಡಲು 23 ಮೊಬೈಲ್ ತಂಡಗಳನ್ನು ರಚಿಸಲಾಗಿದೆ ಪೆÇೀಲಿಯೋ ಮುಕ್ತ ಭಾರತ ಮಾಡಲು ಎಲ್ಲ ಪೆÇೀಷಕರು, ಇಲಾಖೆಯವರು ಹಾಗೂ ಸಂಘ- ಸಂಸ್ಥೆಗಳು ಕೈ ಜೋಡಿಸಬೇಕು ಎಂದರು.
ಆರ್.ಸಿ.ಎಚ್.ಓ. ಡಾ.ಆರ್.ಐ. ಡಾ.ಗಡಾದ ಅವರು ಮಾತನಾಡಿ ಫೆ.27 ರಂದು ಪೆÇೀಲಿಯೋ ಭಾನುವಾರ ಕಾರ್ಯಕ್ರಮ ದೇಶಾಂದ್ಯಂತ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಒಟ್ಟು ನಾಲ್ಕು ದಿನಗಳ ಕಾಲ ಪೆÇೀಲಿಯೋ ಕಾರ್ಯಕ್ರಮ ನಡೆಸಲಾಗುವುದು. ಮೊದಲನೇ ದಿನ ಪೆÇೀಲಿಯೋ ಬೂತ್ ಗಳಲ್ಲಿ ಪೆÇೀಲಿಯೊ ಹನಿ ನೀಡಲಾಗುವುದು ಮತ್ತು ಅನಿವಾರ್ಯ ಕಾರಣಗಳಿಂದ ಲಸಿಕೆ ವಂಚಿತ ಮಕ್ಕಳಿಗೆ ಮನೆ ಮನೆಗೆ ತೆರಳುವ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೆÇೀಲಿಯೊ ಹನಿ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಕಾರ್ಮಿಕ ಇಲಾಖೆ, ಹೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.