ಇಂದು ಸಂತ ಸೇವಾಲಾಲ್ ಅವರ 284ನೇ ಜಯಂತಿ ಅಂಗವಾಗಿ ಸೇವಾಲಾಲ್ ಅವರ ಭಾವಚಿತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪುμÁ್ಪರ್ಚನೆ ಮಾಡಿ ಗೌರವ ಸಲ್ಲಿಸಿದರು.

ಹೌದು ಇಂದು ದೇಶಾಧ್ಯಂತ ಸಂತ ಸೇವಾಲಾಲ್ ಅವರ 284ನೇ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಿ ಸೇವಾಲಾಲ್‍ರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ರುದ್ರಪ್ಪ ಲಮಾಣಿ, ಅವಿನಾಶ್ ಜಾಧವ್, ಎಂಎಲ್‍ಸಿ ಪ್ರಕಾಶ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು. ಲಂಬಾಣಿ ಉಡುಗೆ-ತೊಡುಗೆ ತೊಟ್ಟ ಯುವತಿಯರು ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದರು.