ಪದ್ಮಶ್ರೀ ಪುರಸ್ಕøತ, ಕನ್ನಡದ ಕಬೀರ ಇಬ್ರಾಹಿಂ ಸುತಾರ್ ಅವರ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಬೊಮ್ಮಾಯಿ ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಇಬ್ರಾಹಿಮ್ ಸುತಾರ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.