ಅಕ್ರಮವಾಗಿ ಇರುವ ಜೈಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡಬೇಕು ಇಲ್ಲದಿದ್ದರೆ ನಾನೋಬ್ಬನೆ ಆಮರಣ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ರೈತ ಮುಖಂಡ ಸಿದ್ದಗೌಡ ಮೋದಗಿ ಹೇಳಿದರು.
ಬೆಳಗಾವಿಯ ಎಪಿಎಂಸಿ ಆವರಣದಲಿ ್ಲನಡೆದ ಪತ್ರಿಕಾ ಗೋಷ್ಠಿಯಲ್ಲಿ ರೈತ ಮುಖಂಡ ಸಿದ್ದಗೌಡ ಮೋದಗಿ ಅವರು ಮಾತನಾಡಿ ಜೈಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡದಿದ್ದರೆ ನಾಳೆಯಿಂದ ಹೋರಾಟ ತೀವ್ರಗೊಳಿಸಿ ನಾನೊಬ್ಬನೇ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುವೆ ಎಂದರು.
ಅಕ್ರಮವಾಗಿ ಇರುವ ಜೈಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡಬೇಕು ಎಂದು ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣವೇ ಎಪಿಎಂಸಿ ಉಳಿಸಲು ಮುಂದಾಗಬೇಕು. ಖಾಸಗಿ ತರಕಾರಿ ಮಾರುಕಟ್ಟೆಯನ್ನ ಬಂದ್ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದ್ದು, ನಮ್ಮ ಹೋರಾಟಕ್ಕೆ ಸರ್ಕಾರ ಯಾವುದೇರೀತಿಯ ಸ್ಪಂದನೆ ನೀಡುತ್ತಿಲ್ಲ.