Davanagere

ತುಂಗಾ ಆರತಿ ಹಿನ್ನೆಲೆ: ಹರಿಹರದಲ್ಲಿ 108 ಯೋಗ ಮಂಟಪಗಳ ನಿರ್ಮಾಣಕ್ಕೆ ಸಿ.ಎಂ ಶಿಲಾನ್ಯಾಸ

Share

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಪ್ರಯುಕ್ತ ದಾವಣಗೆರೆಯ ಹರಿಹರದಲ್ಲಿ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿಯೇ ದಕ್ಷಿಣದಲ್ಲಿ ತುಂಗಾ ಆರತಿ ಪ್ರಯುಕ್ತ ದಾವಣಗೆರೆಯ ಹರಿಹರದಲ್ಲಿ, ತುಂಬಭದ್ರಾ ನದಿ ತಟದಲ್ಲಿ ತುಂಗಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ರವಿವಾರ ಶಿಲಾನ್ಯಾಸ ನೆರವೇರಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಹರಕ್ಷೇತ್ರಕ್ಕೆ ಭೇಟಿ ನೀಡಿ ಪೂಜ್ಯರಾದ ವಚನಾನಂದ ಶ್ರೀಗಳಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ವಚನಾನಂದ ಮಹಾಸ್ವಾಮಿಗಳು, ಸಚಿವರಾದ ಬಿ.ಎ. ಬಸವರಾಜ, ಮುರುಗೇಶ್ ನಿರಾಣಿ, ಸಂಸದ ಜಿ.ಎಂ.ಸಿದ್ದೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Tags:

error: Content is protected !!