ಬೆಳಗಾವಿ ನಗರದಲ್ಲಿ ಖಾಸಗಿ ತರಕಾರಿ ಮಾರುಕಟ್ಟೆಯನ್ನು ವಿರೋಧಿಸಿ ರೈತ ಮುಖಂಡ ಸಿದ್ದಗೌಡ ಮೋದಗಿ ನಡೆಸುತ್ತಿದ್ದ ಆಮರಣಾಂತ ಉಪವಾಸ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದಾರೆ.
ಬೆಳಗಾವಿ ನಗರದಲ್ಲಿ ಅಕ್ರಮವಾಗಿ ತಕೆಯೆತ್ತಿರುವ ಖಾಸಗಿ ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಲು ಆಗ್ರಹಿಸಿ ರೈತ ನಾಯಕ ಸದ್ದಗೌಡ ಮೋದಗಿ ಕಳೆದ 5 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. 5ನೇ ದಿನವಾದ ಇಂದು ಧರಣಿ ನಿರತ ಸ್ಥಳಕ್ಕೆ ಇಂದು ಮುಂಜಾನೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.
ಇನ್ನು ಈ ವೆಳೆ ಡಿ.ಕೆ.ಶಿವಕುಮಾರ ರೈತ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಡಿ.ಕೆ.ಶಿವಕುಮಾರ್ ರೈತ ಮುಖಂಡರಿಗೆ ಚರ್ಚೆ ನಡೆಸಿ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದರು. ಇನ್ನು ಡಿ.ಕೆ.ಶಿವಕುಮಾರ್ ಮಾತಿಗೆ ಮನ್ನಣೆ ನೀಡಿದ ರೈತರು ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಈ ವೇಳೆ ಸಿದ್ದಗೌಡ ಮೋದಗಿ ಎಳನೀರು ಸ್ವೀಕರಿಸುವ ಮೂಲಕ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.
ಈ ವೇಳೆ ರೈತ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ರವರು,
ಬೆಳಗಾವಿನಗರದಲ್ಲಿ ನಿಯಮ ಉಲ್ಲಂಘನೆ ಮಾಡಿ ತರಕಾರಿ ಮಾರುಕಟ್ಟೆಗೆ ಅನುಮತಿ ನೀಡಿದ್ದಾರೆ. ಇನ್ನು ಖಾಸಗಿ ತರಕಾರಿ ಮಾರುಕಟ್ಟೆ ಬೆನ್ನಿಗೆ ಸ್ಥಳೀಯ ಬಿಜೆಪಿ ಶಾಸಕರು ನಿಂತಿದ್ದಾರೆ. ಖಾಸಗಿ ತರಕಾರಿ ಮಾರುಕಟ್ಟೆ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ನಿರ್ಧಾರ ಮಾಡಿದ್ದೇವೆ. ಇನ್ನು ನಮ್ಮ ಪರವಾಗಿ ಸದನದಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಯಾವಾಗಲೂ ನಿಮ್ಮ ಜೊತೆಗೆ ನಿಲ್ಲುತ್ತದೆ. ಕೇಂದ್ರ ಸರಕಾರವೇ ರೈತರ ಹೋರಾಟಕ್ಕೆ ಮಣಿದು ನೂತನ ಕೃಷಿ ಕಾಯ್ದೆಗಳನ್ನು ಹಿಮದಕ್ಕೆ ಪಡೆದಿರುವಾಗ ಇವರ್ಯಾರು ಎಂದು ಪ್ರಶ್ನೆ ಮಾಡಿದರು.