ಮಹಾರಾಷ್ಟ್ರದಲ್ಲಿ ಮತ್ತೆ ಡೆಡ್ಲಿ ಕೋವಿಡ್ ಅಟ್ಯಾಕ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್ 4ನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಕಳೆದ 24 ಗಂಟೆಯಲ್ಲಿ 2701 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದರೂ ಕೂಡ ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್ ಎಂದಿದ್ದು. ಬಿಂದಾಸ್ ಆಗಿ ರಾಜ್ಯಕ್ಕೆ ಮಹಾರಾಷ್ಟ್ರ ಪ್ರಯಾಣಿಕರು ಆಗಮಿಸುತ್ತಿದ್ದಾರೆ.

ಹೌದು ಮಹಾರಾಷ್ಟ್ರದಲ್ಲಿ ಕೋವಿಡ್ ತಾಂಡವವಾಡುತ್ತಿದೆ. ಮುಂಬೈ ಮಹಾನಗರವೊಂದರಲ್ಲೇ 1765 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ರೂಲ್ಸ್ ಜಾರಿ ಮಾಡಲಾಗಿದೆ. ಜೂನ್ ತಿಂಗಳ ಆರಂಭದಿಂದ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಸೇರಿ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ಗಡಿಜಿಲ್ಲೆಗಳಲ್ಲಿ ಎಚ್ಚರಿಕೆ ಅಗತ್ಯವಾಗಿದೆ.
ಬೆಳಗಾವಿಯ ಚೆಕ್ಪೆÇೀಸ್ಟ್ಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ ಅನಿವಾರ್ಯ. ಇಲ್ಲವಾದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಕೋವಿಡ್ ಆತಂಕ ವ್ಯಾಪಿಸುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಡಳಿತಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ.