ELECTION

ಎಂ.ಬಿ.ಪಾಟೀಲ ಹಾಗೂ ಆಪ್ತರ ಕಾಲ್ ಹಿಸ್ಟರಿ ತೆಗೆಯುತ್ತಿರುವವರ ವಿರುದ್ಧ ದೂರು

Share

ತಮ್ಮ ಹಾಗೂ ತಮ್ಮ ಕುಟುಂಬ ಮತ್ತು ಆಪ್ತರ ಕಾಲ್ ಯಾರಿಗೂ ನೀಡಬಾರದೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಶಾಸಕ ಎಂ ಬಿ ಪಾಟೀಲ್ ದೂರು ಸಲ್ಲಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ಸಲ್ಲಿಸಿರೋ ಎಂ ಬಿ ಪಾಟೀಲ್ ನನ್ನ ಕ್ಷೇತ್ರ ಬಬಲೇಶ್ವರದಲ್ಲಿ ಕೆಲವರು ದುರುದ್ದೇಶ ದಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ.

 

ಬೆಳಗಾವಿ ಬಾಗಲಕೋಟೆ ಕಲಬುರಗಿ ಹಾಗೂ ಇತರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಮ್ಮ ವಿರೋಧಿಗಳು ಈ ಕೃತ್ಯ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಮೊಬೈಲ್ ಕರೆ ಮಾಹಿತಿ, ನನ್ನ ಪತ್ನಿ ಆಶಾ ಪಾಟೀಲ್,

 

ಸಹೋದರ ಹಾಗೂ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ್, ಪುತ್ರ ಬಸನಗೌಡ ಪಾಟೀಲ್, ಹಾಗೂ ಬಿ ಎಲ್ ಡಿ ಇ ಪ್ರಚಾರ ಅಧಿಕಾರಿ ಮಹಾಂತೇಶ ಬಿರಾದಾರ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಇದು ವೈಯಕ್ತಿಕ ಮಾಹಿತಿ ಕಸಿಯುವ ಯತ್ನವಾಗಿರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿ ಕಾರಣ ನಮ್ಮೆಲ್ಲರ ಕಾಲ್ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಮನವಿ ಮಾಡಿದ್ದಾರೆ.

 

ನಮ್ಮೆಲ್ಲರ ಕಾಲ ಹಿಸ್ಟರಿ ಗಳನ್ನ ಯಾರಿಗೂ ನೀಡದಂತೆ ಸಂಬಂಧಿಸಿದ ಸಿಮ್ ಏಜೆನ್ಸಿ ಹಾಗೂ ಪೊಲೀಸ್ ಇಲಾಖೆಯವರಿಗೆ ಕಟ್ಟುನಿಟ್ಟಾಗಿ ಸೂಚಿಸಲು ದೂರಿನಲ್ಲಿ ಉಲ್ಲೇಖ ಮಾಡಿರುವ ಎಂಬಿ ಪಾಟೀಲ್ ಇವರು ಒಂದು ವೇಳೆ ನಮ್ಮೆಲ್ಲರ ಕಾಲ್ ಹಿಸ್ಟರಿ ನೀಡಿದರೆ ಅದಕ್ಕೆ ಎಜೆನ್ಸಿ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಹೊಣೆ ಯಾಗುತ್ತದೆ ಎಂದು ದೂರು ನೀಡಿದ್ದಾರೆ.

Tags:

error: Content is protected !!