ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಜಯಪುರ ಜಿಲ್ಲೆಯ ನಾಲತಾವಾಡ ಪಟ್ಟಣದಲ್ಲಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೇರವೇರಿಸಿ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎ ಎಸ್. ಪಾಟೀಲ್ ನಡಹಳ್ಳಿ, ರಮೇಶ್ ಬೂಸನೂರು, ಸೋಮನಗೌಡ ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.