ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳವಾರ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ ನಲ್ಲಿ ಪೊಲೀಸರಿಗೆ ಕಾರ್ಯಾಗಾರ ನಡೆಸಲಾಯಿತು.
ಉತ್ತರ ವಲಯದ ವ್ಯಾಪ್ತಿಗೆ ಬರುವ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟ, ವಿಜಯಪುರ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಡಿವೈಎಸ್ಪಿಗಳು, ಇನ್ಸಪೆಕ್ಟರಗಳು ಸೇರಿದಂತೆ 350ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದರು.
ಉತ್ತರ ವಲಯ ಐಜಿಪಿ ಸತೀಶಕುಮಾರ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಚುನಾವಣಾ ಸಂದರ್ಭದಲ್ಲಿ ನಡೆಯುವ ರಾಜಕೀಯ ಘರ್ಷಣೆಗಳು, ಆಮಿಷಗಳು, ಕೋಟ್ಯಾಂತರ ಹಣ ವಿನಿಮಯ ಮತ್ತು ಹಂಚಿಕೆ ಮತ್ತು ಸಾರಾಯಿ ಹಂಚಿಕೆ ಸೇರಿ ಹತ್ತು ಹಲವಾರು ಕಾನೂನು ಬಾಹಿರ ಚಟುವಟಿಕೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಉತ್ತರ ವಲಯ ಜಿಲ್ಲೆಗಳ ಪೊಲೀಸರಿಗೆ ಸಿಐಡಿ ಕಾನೂನು ಕೋಶದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹೇಶ ವಿ. ವೈದ್ಯ ತರಬೇತಿ ನೀಡಿದರು.
ಹಿರಿಯ ಪೊಲೀಸ್ ಅಧಿಕಾರಿಗಳಾದ ಬ, ಗದಗ ಎಸ್ಪಿ. ಬಿ. ಆರ್.ನೇಮಗೌಡ, ಎಚ್.ಟಿ. ಸೋಮಶೇಖರ್, ವೇಣುಗೋಪಾಲ, ಪಿ. ವಿ.ಸ್ನೇಹಾ ಸೇರಿದಂತೆ ಇನ್ನಿತರರ ಅಧಿಕಾರಿಗಳು ಉಪಸ್ಥಿತರಿದ್ದರು.