ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಮೂರು ಶೈಕ್ಷಣಿಕ ವಿಭಾಗಗಳಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ಶೀಘ್ರದಲ್ಲೇ ಮಾಡಬೇಕೆಂದು ಒತ್ತಾಯಿಸಿ ಶನಿವಾರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಾಥಮಿಕ ಶಿಕ್ಷಣ ಇಲಾಖೆಯೂ ಸರಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸುವ ಉದ್ದೇಶದಿಂದ ಹದಿನೈದು ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿತ್ತ. ಕಳೆದ ಡಿಸೆಂಬರ್ ತಿಂಗಳಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಪ್ರಕ್ರಿಯೆ ಕಾನೂನು ತೊಡಕುಗಳಿಂದ ಇಲ್ಲಿಯವರಗೂ ಪೂರ್ಣಗೊಂಡಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಾರ್ಚ್ ನಲ್ಲಿ ಅಂತಿಮಪಟ್ಟಿ ಪ್ರಕಟಿಸಿದೆ. ಆದರೆ ಹೈದ್ರಾಬಾದ್ ಕರ್ನಾಟಕದ ವಿಶೇಷ ಮೀಸಲಾತಿಯಿಂದ ಮತ್ತೆ ನ್ಯಾಯಾಲಯದಲ್ಲಿದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಭೀತಿ ಎದುರಾಗಿದೆ. ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯ ಶೈಕ್ಷಣಿಕ ವಲಯದಲ್ಲಿ ಯಾವುದೇ ತೊಂದರೆ ಇಲ್ಲ. ಆದ್ದರಿಂದ ಚುನಾವಣೆಯ ನೀತಿ ಸಂಹಿತೆ ಬರುವುದರೊಳಗಾಗಿ ಈ ಭಾಗದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.