Shivamogga

ಸಂಸದ ಪ್ರತಾಪ್ ಸಿಂಹ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳರ್ ತಿರುಗೇಟು

Share

ಸಂಸದ ಪ್ರತಾಪ್ ಸಿಂಹ ಸರ್ವಜ್ಞ ಇದ್ದಂತೆ. ಅವರ ಚಿಂತನೆಗಳಿಗೆ ಹಾಗು ಪ್ರಶ್ನೆಗಳಿಗೆ ಸರಿಸಾಟಿ ಆಗುವ ರಾಜಕಾರಣಿಗಳು ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾರೂ ಇಲ್ಲ.

ಇದಕ್ಕಾಗಿಯೇ ಜನರು ಅವರನ್ನು ಸುಮ್ಮನಿರಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳರ್ ತಿರುಗೇಟು ನೀಡಿದ್ದಾರೆ.
ಇಂದು ಭದ್ರಾವತಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಾಪ ಸಿಂಹ ಹೇಳಿಕೆ ಟಾಂಗ್ ಕೊಟ್ಟರು.

ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಮುಸ್ಲಿಂ ಸಮುದಾಯದಲ್ಲಿ ಒಂದು ಮನೆಯಲ್ಲಿ 3-4 ಜನ ಹೆಂಡತಿಯರು ಇರುತ್ತಾರೆ. ಅವರಲ್ಲಿ ಯಾರಿಗೆ ಗೃಹ ಲಕ್ಷ್ಮೀ ಯೋಜನೆ ನೀಡುತ್ತಾರೆ. ಸಂಸಾರದಲ್ಲಿ ಜಗಳ ಹಚ್ಚುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಪ್ರತಾಪ್ ಸಿಂಹ ಶನಿವಾರ ಹೇಳಿದ್ದರು.

ಈ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ವರ್, ಯಾವ ರೀತಿ ಆಡಳಿತ ಕೊಡಬೇಕು. ಯಾವ ರೀತಿ ಸಮಾಜ ಕಟ್ಟಬೇಕು ಎಂಬುದು ನಮಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅಧಿಕಾರ ಕೊಟ್ಟಿದ್ದಾರೆ ಎಂದು ಟಾಂಗ್ ಕೊಟ್ಟರು.

Tags:

error: Content is protected !!