ಶಿವಮೊಗ್ಗ : ಇಂತಹ ಘಟನೆಯನ್ನು ಎಂದೂ ನೋಡಿಲ್ಲ. ಒಂದೇ ಸಲ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಪೊಲೀಸರು ಸಹ ಅಸಹಾಯಕರಾಗಿದ್ದರು. ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ” ಇದು ರಾಗಿಗುಡ್ಡಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರ ಮುಂದೆ ಮಹಿಳೆಯೊಬ್ಬರು ಅಳಲು ತೋಡಿಕೊಂಡ ರೀತಿ.
ಈದ್ ಮಿಲಾದ್ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ನಡೆದಿದ್ದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯ ನಾಯಕರ ತಂಡವು ರಾಗಿಗುಡ್ಡಕ್ಕೆ ಭೇಟಿ ನೀಡಿತು.
ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಆಗಮಿಸಿರುವ ಸತ್ಯ ಶೋಧನಾ ತಂಡದ ಎದುರು ಹಾನಿಗೊಳಗಾದ ನಿವಾಸಿಗಳು ಕಣ್ಣೀರು ಹಾಕಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವರಾದ ಅಶ್ವತ್ ನಾರಾಯಣ್, ಕೆ.ಎಸ್ ಈಶ್ವರಪ್ಪ, ಎನ್ ರವಿಕುಮಾರ್, ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ನಾಯಕರು ಜೊತೆಗಿದ್ದರು.