ಮಂಡ್ಯ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ರಿಂದ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ 28 ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ. ಚುನಾವಣೆ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ಅದರ ಆಧಾರದ ಮೇರೆಗೆ ಮಾತನಾಡುತ್ತಿದ್ದೇನೆ’ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ರಿಂದ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು .
ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದು, ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದರು.
ಕಳೆದ ಬಾರಿ ಮೈತ್ರಿಯಿಂದ ಬಿಜೆಪಿ ಯನ್ನು ಎದುರಿಸಿದ್ದು ಈ ಬಾರಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸುತ್ತಿರುವ ಬಗ್ಗೆ ಮಾತನಾಡಿ ಈಗ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿ ಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.