ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಅದಕ್ಕೆ ಇವಿಎಂ ನಲ್ಲಿನ ದೋಷಗಳೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟಾಂಗ್ ನೀಡಿದರು.
ಕಲಬುರಗಿ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಗೆದ್ದರೆ ಅದಕ್ಕೆ ಇವಿಎಂನಲ್ಲಿನ ದೋಷವೇ ಕಾರಣ ಎಂಬ ಹೇಳಿಕೆಯನ್ನು ಸಿಎಂ, ಡಿಸಿಎಂ ಪುನರಾವರ್ತನೆ ಮಾಡುತ್ತಾರೆ , ಕಾಂಗ್ರೆಸ್ನವರು ಉಚಿತ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲ್ಲಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ಇನ್ನು ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್ಗೆ ನಿರಾಸೆಯಾಗೋದು ಖಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದರು
ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ , ಎಲ್ಲಾ ಹುದ್ದೆಗೆ ಅದರದ್ದೇ ಆದ ಗೌರವವಿದೆ. ಹೇರ್ ಕಟ್ ಬಗ್ಗೆ ನಾನಲ್ಲ ದಾವಣಗೆರೆಯಲ್ಲಿ ಕೆಲ ಶಿಕ್ಷಕರು ಮಾತನಾಡಿದ್ದನ್ನು ಅವರಿಗೆ ತಿಳಿಸಿದ್ದೇನೆ ಅಷ್ಟೆ. ಶಿಕ್ಷಣ ಸಚಿವರು ಮಾದರಿಯಾಗಿರಬೇಕು ಎಂದು ಅವರು ಮಾತನಾಡಿಕೊಳ್ಳುತ್ತಿದ್ದರು. ಹೀಗಾಗಿ ಕಟಿಂಗ್ ಮಾಡಿಸಿಕೊಂಡು, ತಲೆಗೆ ಎಣ್ಣೆ ಹಚ್ಚಿ ಬನ್ನಿ ಎಂದಿದ್ದು. ಅವರ ಬಳಿ ಹಣ ಇಲ್ಲದಿದ್ದರೆ ನಮ್ಮ ಯುವ ಮೋರ್ಚಾಗೆ ಹೇಳಿ ದುಡ್ಡಿನ ವ್ಯವಸ್ಥೆ ಮಾಡಿಸುತ್ತೇವೆ . ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಕರ್ನಾಟಕದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ದೇಶದಲ್ಲಿಯೇ ಚರ್ಚೆ ಆಗುತ್ತಿದೆ. ಚನ್ನಗಿರಿಯಲ್ಲಿ ಪೊಲೀಸರಿಗೆ ರಕ್ಷಣೆ ಇಲ್ಲದ ಘಟನೆ ನಡೆದಿದೆ. ಮಟಕಾ ದಂಧೆ ಯಥೇಚ್ಛವಾಗಿ ನಡೆಯುತ್ತಿದೆ. ಅಕ್ರಮ ದಂಧೆಗಳು ಯಾರ ಭಯವೂ ಇಲ್ಲದೇ ನಡೆಯುತ್ತಿವೆ. ಸಾವಿರಾರು ಜನ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ ಹಾಗೂ ಸಿಎಂ, ಗೃಹ ಸಚಿವರು ಇದಾರೋ ಇಲ್ಲವೋ ಎನ್ನುವ ಸ್ಥಿತಿ ಎದುರಾಗಿ ಜನ ಆತಂಕಕ್ಕೆ ಒಳಗಾಗಿದ್ದಾರೆ ಎಂದು ವಿಜಯೇಂದ್ರ ಆತಂಕ ವ್ಯಕ್ತಪಡಿಸಿದರು .
ಬೈಟ್