FIRE

ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

Share

 

ಹಾವೇರಿ ಜಿಲ್ಲೆಯ ಚಿಕ್ಕೇರೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು ಐದಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿವೆ .

ಘಟನೆಯಲ್ಲಿ ಸುಮಾರು 30 ಲಕ್ಷ ರೂ.ಗಿಂತ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.‍ ಸದ್ಯ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ದಟ್ಟ ಹೊಗೆ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ ,
ಎಲೆಕ್ಟ್ರಿಕಲ್ ಅಂಗಡಿ, ಬೇಕರಿ, ಗೊಂಬಿ ಅಂಗಡಿ, ಫುಟವೇರ್ ಅಂಗಡಿ, ಹೊಟೇಲ್ ಭಸ್ಮ.ವಾಗಿದೆ. ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!