ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ಇರುವ ಆದರ್ಶ ಲಾಡ್ಜ್ನಲ್ಲಿ ನಡೆದಿದೆ.

ನೆರೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಮೂಲದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ದಿನಗಳ ಹಿಂದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇಹದಿಂದ ವಾಸನೆ ಹಿನ್ನಲೆಯಲ್ಲಿ ಲಾಡ್ಜ್ ರೂಮ್ ಲಾಕ್ ಓಪನ್ ಮಾಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
