ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಆಗಿರುವ, ಅರೆ ಮಲೆನಾಡು ಎಂದು ಕೂಡ ಖ್ಯಾತಿ ಗಳಿಸಿರುವ ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ .

ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಬೊಮ್ಮಾಯಿ ಅವರೀಗ ಲೋಕಸಭೆ ಚುನಾವಣೆಯಲ್ಲೂ ಗೆದ್ದಿದ್ದಾರೆ. ಲಿಂಗಾಯತ ಸಮುದಾಯದವರೇ ನಿರ್ಣಾಯಕರಾಗಿರುವ, ಕುರುಬ ಸಮುದಾಯದ ಮತದಾರರೂ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಶಾಸಕ ಬಸವರಾಜ್ ಬೊಮ್ಮಾಯಿ ಅವರು ಸ್ಪರ್ಧಿಸಿದ್ದು, ಜಾತಿ ಬಲ, ಮೋದಿ ನಾಮಬಲದಿಂದ ಗೆಲುವಿನ ವಿಶ್ವಾಸದಲ್ಲಿದ್ದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯರು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಹಾವೇರಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಇನ್ನೂ ಮಾಧ್ಯಮಗಳೊಂದಿಗೆ ಗೆಲ್ಲುವಿನ ಸಂಭ್ರಮ ಹಂಚಿಕೊಂಡರು .
