ಕಲಬುರಗಿಯ ಖಾಸಗಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಹತ್ತು ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ 6.15ರ ಸುಮಾರಿಗೆ ಬೆಳಿಗ್ಗೆ ಉಪಾಹಾರದ ಸಿದ್ಧತೆಯಲ್ಲಿದ್ದರು. ಆ ವೇಳೆ ಗ್ರಾಹಕರು ಕಡಿಮೆ ಇದ್ದರು. ಇದರಿಂದ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿದೆ.
ಸಪ್ತಗಿರಿ ಆರೇಂಜ್ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ.
ಅವಘಡದಲ್ಲಿ ಹೋಟೆಲ್ ಕಾರ್ಮಿಕರಾದ ಗುರುಮೂರ್ತಿ, ಪ್ರಶಾಂತ್, ರಾಕೇಶ್, ಶಂಕರ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಎಂಬುವವರು ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡ ತಕ್ಷಣ ಕೆಲ ಕಾರ್ಮಿಕರು ಹೊರಗಡೆ ಓಡಿದ್ದಾರೆ. ಇನ್ನು ಕೆಲವರು ಹೋಟೆಲ್ ಹಿಂದೆ ಓಡಿದ್ದಾರೆ. ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆ ಹರಡಿದೆ. ಗಾಯಗೊಂಡ ಇಬ್ಬರನ್ನು ಜಿಮ್ಸ್ ನ ಟ್ರಾಮಾ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.