ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ತೂಗುದೀಪ್ ಹಾಗೂ ಇತರ ಮೂವರು ಆರೋಪಿಗಳನ್ನು ನ್ಯಾಯಾಲಯ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದರ್ಶನ್ ಹಾಗೂ ಗ್ಯಾಂಗ್ ನ ಕಸ್ಟಡಿ ಇಂದು ಮುಗಿದಿರುವ ಹಿನ್ನೆಲೆ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ದರ್ಶನ್, ವಿನಯ್, ಪ್ರದೂಶ್ ಹಾಗೂ ಧನರಾಜ್ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳಾಗಿರುವ ದರ್ಶನ್ ಹಾಗೂ ಗ್ಯಾಂಗ್ ಅನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಬಳಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.