Belagavi

ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಗಾವಿಯಲ್ಲಿ ಜಂಗಮ ಸಮಾಜ ಮತ್ತು ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

Share

ಜಂಗಮ ಸಮಾಜದ ಯುವಕ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪಿ ಪವಿತ್ರಾ ಗೌಡ, ನಟ ದರ್ಶನ ಹಾಗೂ ಕೊಲೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿ ಜಿಲ್ಲೆಯ ಜಂಗಮ ಸಂಘಟನೆ ಮತ್ತು ವಿವಿಧ ಕನ್ನಡ ಸಂಘಟನೆಗಳು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ‌ ದರ್ಶನ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಸರಕಾರಕ್ಕೆ ಒತ್ತಾಯಿಸಿದರು‌.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ್ ಹಾಗೂ ಈಗ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆಯಾಗಿವೆ. ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿರುವ ಪವಿತ್ರಾಗೌಡ, ನಟ ದರ್ಶನ ಸೇರಿದಂತೆ ಉಳಿದ ಎಲ್ಲ ಆರೋಪಿಗಳ ಮೇಲೆ ಸರಕಾರ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾತನಾಡಿದ ಮಹಾಂತೇಶ ರಣಗಟ್ಟಿಮಠ, ಪವಿತ್ರಾಗೌಡ ಹಾಗೂ ನಟ ದರ್ಶನ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ರಾಷ್ಟ್ತಪತಿಗಳ ಆಡಳಿತವನ್ನು ಕರ್ನಾಟಕದಲ್ಲಿ ತರುವ ಅಗತ್ಯ ಇದೆ. ರೇಣುಕಾಸ್ವಾಮಿಯನ್ನು ಕೊಂದ ಆರೋಪಿಗಳಿಗೆ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸರಕಾರ ಆರ್ಥಿಕ ಸಹಾಯ ಮಾಡಬೇಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಜೀದ್ ಹಿರೇಕುಡಿ, ಸಂಗೀತಾ ಕಾಂಬಳೆ, ಮಹೇಶ್ ಹಿರೇಮಠ, ಈರಣ್ಣಾ ಹಿರೇಮಠ, ಜಗದೀಶ್ ಮಠದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

 

Tags:

error: Content is protected !!