ಎಐಸಿಸಿ ಮಟ್ಟದಲ್ಲಿ ಕರ್ನಾಟಕದಲ್ಲಿ 15 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ನಾವು 09 ಸ್ಥಾನ ಬಂದೆವು. ಸರ್ಕಾರ ಇದ್ದು ಕೂಡ ಇಷ್ಟೊಂದು ಕಡಿಮೆ ಆಯ್ತು ಎಂದು ಫಾಕ್ಟ್ ಫೈಂಡಿಂಗ್ ಕಮಿಟಿ ರಚನೆ ಮಾಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಎಐಸಿಸಿ ಮಟ್ಟದಲ್ಲಿ 15 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ನಾವು 09 ಸ್ಥಾನ ಬಂದೆವು. ಸರ್ಕಾರ ಇದ್ದು ಕೂಡ ಇಷ್ಟೊಂದು ಕಡಿಮೆ ಆಯ್ತು ಎಂದು ಆತ್ಮಾವಲೋಕನ ಅಥವಾ ಫಾಕ್ಟ್ ಫೈಂಡಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಇದು ಇಲ್ಲಿ ಅಷ್ಟೇ ಅಲ್ಲ, ಬೇರೆ ರಾಜ್ಯಕ್ಕೂ ಮಾಡಿದ್ದಾರೆ , ಈ ವರದಿ ಮೇಲೆ ಸಚಿವ ಸಂಪುಟ ಬದಲಾವಣೆ, ‘ಅದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಹೈ ಕಮಾಂಡ್ ಏನು ತೀರ್ಮಾನ ಮಾಡುತ್ತೋ ನಮಗೆ ಗೊತ್ತಾಗಲ್ಲ. ಎಂದು ಹೇಳಿದ್ದರು .
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ, ತಪ್ಪಿತಸ್ಥರೆಂದೇ ಪರಿಗಣಿಸಲಾಗುತ್ತದೆ. ಆರೋಪಿಗಳು ಯಾವ ಪಕ್ಷದಲ್ಲಿ ಇದ್ದಾರೆ ಎನ್ನುವುದು ಮುಖ್ಯವಾಗುವುದಿಲ್ಲ. ಯಾರು ಏನು ತಪ್ಪು ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ತನಿಖೆ, ವಿಚಾರಣೆ ನಡೆಸಲಾಗುತ್ತದೆʼ ʻಜೈಲಿನಲ್ಲಿ ಹಣ ಸೇರಿದಂತೆ ವಿವಿಧ ಸೌಲಭ್ಯಗಳು ಸಿಗುತ್ತವೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಜೈಲಿನಲ್ಲಿ ನಟ ದರ್ಶನ್ ಅವರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ,ʼ ʻಇದು ಕೆಲವೊಂದು ಸಂದರ್ಭದಲ್ಲಿ ಸತ್ಯ ಇರಬಹುದು. ಜೈಲುಗಳ ಮೇಲೆ ದಾಳಿ ನಡೆಸಿದಾಗ ಫೋನ್ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿರುವ ಉದಾಹರಣೆ ಇದೆ. ಅಧಿಕಾರಿಗಳ ಕಣ್ತಪ್ಪಿಸಿ ಈ ರೀತಿ ನಡೆದಿರುತ್ತದೆ. ಜೈಲಿನ ಅಧಿಕಾರಿಗಳು ನಿಗಾವಹಿಸುತ್ತಾರೆ. ಇಂತಹ ಘಟನೆಗಳಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆʼ ಎಂದು ಹೇಳಿದ್ದರು .
ʻರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದರು. ಆದರೆ, ಎರಡು ದಿನ ಕಸ್ಟಡಿಗೆ ಮಾತ್ರ ಅನುಮತಿ ಸಿಕ್ಕಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆʼ ಎಂದು ತಿಳಿಸಿದ್ದರು .
ವಾಲ್ಮೀಕಿ ನಿಗಮದ ಹಗರಣದ ಬ್ಯಾಂಕಿಂಗ್ ತನಿಖೆಯನ್ನುಸಿಬಿಐ ಮಾಡುತ್ತಿದೆ. ಆದರೆ ಈವರೆಗೂ ನಮ್ಮನ್ನು ಯಾವ ಸಿಬಿಐ ಅಧಿಕಾರಿಗಳು ಸಂಪರ್ಕಿಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದರು.