ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ಹಾಸ್ಟಲ್ ರೂಮ್ ದಲ್ಲಿ ನೇಣು ಹಾಕಿಕ್ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟಲ್ ದಲ್ಲಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ, ರಾಕೇಶ್ ಬಿವಿಬಿ ಕಾಲೇಜಿ ನಲ್ಲಿ ಬಿಇ 6ನೆ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಕೇಶ್ ನಿತ್ಯ ಆನ್ಲೈನ್ ಗೇಮ್ ಆಡ್ತಿದ್ದ ಎಂಬ ಮಾಹಿತಿ ತಿಳಿದಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣವನ್ನು ಕಳೆದುಕೊಂಡಿದ್ದನಂತೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ವಸತಿ ನಿಲಯಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್. ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ..
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.