2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ. ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದದ ಆರೋಪವನ್ನು ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್ಗೆ ಹೈಕೋರ್ಟ್ ದಂಡ ವಿಧಿಸಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ.
ಈ ಕುರಿತು ಶಾಸಕ ಯತ್ನಾಳ್ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು” ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.